ಬಿಜೆಪಿಗೆ ಮರಳಿ ಬಂದ ಮಾಜಿ ಸಚಿವ ಸೊಗಡು ಶಿವಣ್ಣ
Mar 24 2024, 01:40 AM ISTಕಳೆದ ವಿಧಾನಸಭಾ ಚುನಾವಣೆ ನಂತರ ಬಿಜೆಪಿ ಒಡನಾಟದಿಂದ ದೂರವಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾದರು. ಸಂಜೆ ನಗರದಲ್ಲಿ ನಡೆದ ದೇಶ ಭಕ್ತ ಸಮಾನ ಮನಸ್ಕ ಕಾರ್ಯಕರ್ತರ ಮಿಲನ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಟಿ.ರವಿ ಅವರು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರ ಸಮ್ಮುಖದಲ್ಲಿ ಸೊಗಡು ಶಿವಣ್ಣ ಅವರಿಗೆ ಪಕ್ಷದ ಶಾಲು ಹೊದಿಸಿ ಬಿಜೆಪಿಗೆ ಬರಮಾಡಿಕೊಂಡರು.