ಮಂಗನಕಾಯಿಲೆಗೆ ಬಲಿ ಆದವರಿಗೆ ಪರಿಹಾರ ಬಗ್ಗೆ ಸಿಎಂ ಜತೆ ಚರ್ಚೆ: ಸಚಿವ ದಿನೇಶ್‌ ಗುಂಡೂರಾವ್‌

Feb 20 2024, 01:47 AM IST
ಮಂಗನ ಕಾಯಿಲೆಯಿಂದ ಮೃತಪಟ್ಟವರ ಕುಟುಂಬಕ್ಕೆ ಈ ಹಿಂದೆ ಪರಿಹಾರ ನೀಡಿರುವ ಹಿನ್ನೆಲೆಯಲ್ಲಿ ಈಗ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ವಿಧಾನಸಭೆ ಅಧಿವೇಶನದಲ್ಲಿ ಭರವಸೆ ನೀಡಿದ್ದಾರೆ. ಶೂನ್ಯವೇಳೆಯಲ್ಲಿ ಬಿಜೆಪಿಯ ಡಿ.ಎಸ್‌. ಅರುಣ್‌ ಅವರು ಈ ಕುರಿತು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಈ ಹಿಂದೆ ಮಂಗನ ಕಾಯಿಲೆಯಿಂದ ಸಾವಿಗೀಡಾದ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ನೀಡಿರುವ ಬಗ್ಗೆ ಪರಿಶೀಲಿಸುವ ಜತೆಗೆ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.