ಸಚಿವ ಶಿವಾನಂದ ಪಾಟೀಲ್ ವಿರುದ್ಧ ಕೋಡಿಹಳ್ಳಿ ಆಕ್ರೋಶ
Dec 28 2023, 01:45 AM ISTರೈತರ ಬಗ್ಗೆ ಕೇವಲವಾಗಿ ಮಾತನಾಡಿರುವ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ವಿರುದ್ಧ ರಾಜ್ಯ ರೈತ ಸಂಘದ ಸದಸ್ಯರು ಹಾಸನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಶಿವಾನಂದ ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬರಗಾಲವನ್ನು ನಿಭಾಯಿಸಲು ವಿಫಲರಾಗಿರುವ ಸರ್ಕಾರದ ವಿರುದ್ಧ ಹೋರಾಟದ ಮುಂದಿನ ರೂಪುರೇಷೆಯನ್ನು ತೆಗೆದುಕೊಳ್ಳುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.