ಲೋಕಸಭೆಗೆ ಕಾಂಗ್ರೆಸ್ನಿಂದ ಸ್ಪರ್ಧಿಸುವುದು ಸುಳ್ಳು: ಮಾಜಿ ಸಚಿವ ವಿ.ಸೋಮಣ್ಣ
Dec 14 2023, 01:30 AM ISTಲೋಕಸಭೆಗೆ ಕಾಂಗ್ರೆಸ್ನಿಂದ ಸ್ಪರ್ಧಿಸುವುದು ಸುಳ್ಳು ವಿಚಾರ, ಚುನಾವಣೆ ನಿಲ್ಲೋದು ಬಿಡೋದು ಅನ್ನುವುದಕ್ಕಿಂತ ಹೆಚ್ಚಾಗಿ ನನಗೆ ಅದರ ಅವಶ್ಯಕತೆಯಿಲ್ಲ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.ಸೋಂಪುರ ಹೋಬಳಿಯ ವನಕಲ್ಲು ಮಠದಲ್ಲಿ ಮಾತನಾಡಿದ ಅವರು, ರಾಷ್ಟ್ರಕ್ಕೆ ಮೋದಿಯವರ ಅವಶ್ಯಕತೆ ಇದೆ. ದೇಶದ ಜನ ಅಲ್ಲ ಇಡೀ ಜಗತ್ತಿನ ಜನ ಇವತ್ತಿನ ಸಂದರ್ಭ, ಸನ್ನಿವೇಶಕ್ಕೆ ಮೋದಿಯವರ ಅವಶ್ಯಕತೆ ಬಹಳಷ್ಟಿದೆ ಎಂದು ಹೇಳುತ್ತಿದ್ದಾರೆ. ಮೋದಿ ಇಲ್ಲದಿದ್ದರೆ ದೇಶದ ಪರಿಸ್ಥಿತಿ ಬೇರೆಯಾಗುತ್ತಿತ್ತು ಹಾಗಾಗಿ ದೇಶದ ಬಗ್ಗೆ ಚಿಂತನೆ ಮಾಡೋಣ ಎಂದರು.