ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ: ಸಚಿವ ದರ್ಶನಾಪೂರ
Nov 21 2023, 12:45 AM ISTಸಾಮಾಜಿಕ ನ್ಯಾಯದ ಅಡಿ ನಿಷ್ಠೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ, ಸೂರಿಲ್ಲದ ನಿಜವಾದ ಫಲಾನುಭವಿಗಳನ್ನು ಗುರುತಿಸಿ ನಿವೇಶನಗಳನ್ನು ಕಲ್ಪಿಸಬೇಕು. ಪಕ್ಷದ ಘನತೆಗೆ ಧಕ್ಕೆ ತರುವ ಕೆಲಸ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅವರು ನೂತನ ನಗರ ಆಶ್ರಯ ಸಮಿತಿ ಅಧ್ಯಕ್ಷರಿಗೆ ಸೂಚಿಸಿದರು.ತಾಲೂಕಿನ ಭೀಮರಾಯನ ಗುಡಿಯಲ್ಲಿ 2ನೇ ಬಾರಿಗೆ ನಗರ ಆಶ್ರಯ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ವಸಂತಕುಮಾರ ಸುರಪುರಕರ್ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿ, ಸನ್ಮಾನಿಸಿ ಮಾತನಾಡಿದರು.