ಸಾರ್ವಜನಿಕರ ಅಹವಾಲು ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವ
Jan 03 2024, 01:45 AM ISTಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಮಂಗಳವಾರ ನಗರದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಕುಂದು ಕೊರತೆಗಳನ್ನು ವಿಚಾರಿಸಿ, ಸಮಸ್ಯೆ ಅಹವಾಲುಗಳನ್ನು ಕೇಳಿ ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಹಾರಕ್ಕೆ ಸೂಚನೆ ನೀಡಿದರು.