ಕುಸುಮ್- ಸಿ ಯೋಜನೆ ಬೆಂ.ಗ್ರಾ ಜಿಲ್ಲೆಯಲ್ಲೂ ಅನುಷ್ಠಾನ :ಸಚಿವ ಕೆ.ಜೆ.ಜಾರ್ಜ್
Feb 20 2025, 12:49 AM ISTರಾಜ್ಯಾದ್ಯಂತ ಮುಂದಿನ ಆರ್ಥಿಕ ವರ್ಷದಲ್ಲಿ 100 ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸುವ ಗುರಿ ಇದೆ ಎಂದು ಹೇಳಿದರು.ನೆಲಮಂಗಲ ಶಾಸಕ ಶ್ರೀನಿವಾಸ ಮಾತನಾಡಿ, ನೆಲಮಂಗಲ ತಾಲೂಕಿನಲ್ಲಿ ₹300 ಕೋಟಿ ವೆಚ್ಚದ 220 ಕೆ.ವಿ ವಿದ್ಯುತ್ ಸ್ಥಾವರ ನಿರ್ಮಾಣದಿಂದ ಭವಿಷ್ಯದ ವಿದ್ಯುತ್ ಹೊರೆಯನ್ನು ನೀಗಿಸಬಹುದು. ಜೊತೆಗೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬಹುದು. ತಾಲೂಕಿಗೆ ನೆಲದಡಿ(ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್) ಅಳವಡಿಕೆಗೆ ಮಂಜೂರು ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ತಾಲೂಕಿನಲ್ಲಿ ನಾಲ್ಕು ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕೂಡ ಅನುಮೋದನೆ ನೀಡಿದ್ದಾರೆ ಎಂದರು.