ಆನಂದ ಮಹಲ ಅಭಿವೃದ್ಧಿಗೆ ಕ್ರಮ: ಸಚಿವ ಕೃಷ್ಣಬೈರೇಗೌಡ
Apr 14 2025, 01:22 AM ISTಕನ್ನಡಪ್ರಭ ವಾರ್ತೆ ವಿಜಯಪುರಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನಗರದ ಆನಂದ ಮಹಲ್ಗೆ ಭೇಟಿ ನೀಡಿ, ಕಟ್ಟಡವನ್ನು ವೀಕ್ಷಣೆ ಮಾಡಿದರು. ಆನಂದ ಮಹಲ್ ಕಂದಾಯ ಇಲಾಖೆಗೆ ಒಳಪಟ್ಟಿರುವುದರಿಂದ ಈ ಐತಿಹಾಸಿಕ ಕಟ್ಟಡವನ್ನು ಸಾರ್ವಜನಿಕ ಉಪಯೋಗಕ್ಕಾಗಿ ಬಳಸಿಕೊಂಡು, ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಚಟುವಟಿಕೆಗಳು ಸೇರಿದಂತೆ ಕೈಗೊಳ್ಳಬಹುದಾದ ಅಭಿವೃದ್ಧಿ ಕಾರ್ಯ ಕೈಗೊಂಡು ಉಪಯೋಗ ಮಾಡಿಕೊಳ್ಳಬೇಕು ಎಂದರು.