26, 27ರಂದು ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ: ಸಚಿವ ಜಾರಕಿಹೊಳಿ
Dec 22 2024, 01:31 AM ISTಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ. 26, 27ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.