ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್ಎಂ) ಅನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲು ಬುಧವಾರ ಅನುಮೋದನೆ ನೀಡಿದೆ.
ಇತ್ತೀಚೆಗೆ ಬೆಂಗಳೂರು, ನಂಜನಗೂಡು ಮತ್ತು ಹೊನ್ನಾವರದಲ್ಲಿ ನಡೆದ ಗೋವುಗಳ ಮೇಲಿನ ವಿಕೃತಿ ಪ್ರಕರಣ ಕುರಿತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಪ್ರಕರಣದ ಕುರಿತು ರಾಜ್ಯ ಸರ್ಕಾರ ತನಿಖೆಗೆ ಸೂಚಿಸಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಎಚ್ಚರಿಕೆಗೂ ಕ್ಯಾರೆ ಎನ್ನದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ.
ಬಸವನಗೌಡ ಪಾಟೀಲ್ ಯತ್ನಾಳ್, ಒಳ್ಳೆಯ ವ್ಯಕ್ತಿ ರಮೇಶ ಜಾರಕಿಹೊಳಿಗೂ ಹಾಳು ಮಾಡುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಬಗ್ಗೆ ಈ ಇಬ್ಬರಿಗೂ ಮಾತನಾಡುವ ನೈತಿಕತೆಯೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತೆ ದಾವಣಗೆರೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.
ನಮಗೂ ನರೇಂದ್ರಸ್ವಾಮಿ ಮಂತ್ರಿ ಆಗಬೇಕು ಎನ್ನುವ ಆಸೆ ಇದ್ದು, ಅವರ ಬೆಂಬಲಕ್ಕೆ ಇದ್ದೇವೆ. ಈ ಬಾರಿ ಅವರಿಗೆ ಮಂತ್ರಿ ಸ್ಥಾನ ಸಿಗುತ್ತೆ ಎನ್ನುವ ವಿಶ್ವಾಸವಿದೆ. ನರೇಂದ್ರಸ್ವಾಮಿ ಅವರಿಗೆ ಮಂತ್ರಿ ಸ್ಥಾನ ನೀಡುವುದು ನಮ್ಮ ಕೈಯಲ್ಲಿಲ್ಲ.