ಹಾವೇರಿ ತಹಸೀಲ್ದಾರ್ ಕಚೇರಿ ಅವ್ಯವಸ್ಥೆ ಕಂಡು ದಂಗಾದ ಸಚಿವರು
Aug 20 2024, 12:57 AM ISTಇಲ್ಲಿಯ ತಹಸೀಲ್ದಾರ್ ಕಚೇರಿ, ಎಸಿ ಕಚೇರಿ, ಉಪನೋಂದಣಾಧಿಕಾರಿ, ಭೂಮಾಪನ ಇಲಾಖೆ ಕಚೇರಿಗಳಿಗೆ ಸೋಮವಾರ ಅನಿರೀಕ್ಷಿತ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಅಲ್ಲಿನ ಅವ್ಯವಸ್ಥೆ ಕಂಡು ದಂಗಾದರು. ಒಂದು ತಿಂಗಳೊಳಗೆ ವ್ಯವಸ್ಥೆ ಸರಿಪಡಿಸದಿದ್ದರೆ ನಿಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಉಪವಿಭಾಗಾಧಿಕಾರಿ ಮತ್ತು ತಹಸೀಲ್ದಾರ್‌ಗೆ ಎಚ್ಚರಿಕೆ ನೀಡಿದರು.