‘ಏಕನಾಥ್ ಶಿಂಧೆ ಒಬ್ಬರೇ, ಪವಾರ್ ಕೂಡ ಒಬ್ಬರೇ ಅವರಂತೆ ಮತ್ತೊಬ್ಬರು ಹುಟ್ಟಿಕೊಳ್ಳಲು ಆಗುವುದಿಲ್ಲ. ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗುವುದಿಲ್ಲ. ಯಾವುದೇ ಕ್ರಾಂತಿಗೂ ಹೈಕಮಾಂಡ್ ಅವಕಾಶ ನೀಡುವುದಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
‘ಕಾಂಗ್ರೆಸ್‌ನಲ್ಲಿ ಹಿಂದೆ ದೇವರಾಜ ಅರಸು, ಬಂಗಾರಪ್ಪ ಅವರಂತಹ ನಾಯಕರು ಅಹಿಂದ ವರ್ಗಕ್ಕೆ ಶಕ್ತಿ ತುಂಬಿದ್ದರು. ನಂತರ ಸಿದ್ದರಾಮಯ್ಯ ಆ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ಗೆ ಅಹಿಂದ ನಾಯಕತ್ವ ಅನಿವಾರ್ಯ. ಆದರೆ, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ನಂತರ ಯಾರು ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತೆ’
ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆ ಮತ್ತು ಗೊಂದಲಗಳಿಗೆ ಹೈಕಮಾಂಡ್ ನಾಯಕರು ಪೂರ್ಣ ವಿರಾಮ ಹಾಕಬೇಕು, ಇಲ್ಲದಿದ್ದರೆ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗುವ ಸಾಧ್ಯತೆಯಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.
ಆರ್‌ಎಸ್‌ಎಸ್ ಗೀತೆ ಹಾಡಿದ ಕೂಡಲೇ ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿಯವರು ಮುಖ್ಯಮಂತ್ರಿ ಮಾಡುತ್ತಾರೆ ಎನ್ನುವುದಾದರೆ ನಾನು ಹಾಗೂ ನಮ್ಮ ಶಾಸಕರು ಸಹ ಹಾಡುತ್ತಾರೆ, ನಮ್ಮನ್ನು ಸಿಎಂ ಮಾಡುತ್ತಾರೆಯೇ? ಎಂದು ಸಚಿವ ಸತೀಶ ಜಾರಕಿಹೊಳಿ ವ್ಯಂಗವಾಡಿದ್ದಾರೆ.
ತಮಗೆ ಹಿಂದೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದನ್ನು ಪಕ್ಷದ ವರಿಷ್ಠರು ಮುಂದೆ ಸರಿಪಡಿಸಬಹುದು ಎನ್ನುವ ಸಂದೇಶ ನೀಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸಮಾಧಾನ ಹೊರಹಾಕಿದ್ದರೂ ಹಾಕಿರಬಹುದು - ಸತೀಶ್ ಜಾರಕಿಹೊಳಿ