ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಶಾಸಕ ಸತೀಶ್ ಸೈಲ್ ಸೇರಿ ಇತರೆ ಅಪರಾಧಿಗಳ ವಿರುದ್ಧದ ಶಿಕ್ಷೆ ಪ್ರಮಾಣ ಘೋಷಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರಕ್ಕೆ ಮುಂದೂಡಿದೆ.
ನಮ್ಮ ತಂದೆ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಬೇಕೆಂಬುದು ಎಲ್ಲರ ಆಶಯವಾಗಿದೆ. ಸಮಯ, ಸಂದರ್ಭ ಬರಲಿ. ಆಗ ನೋಡೋಣ ಎಂದು ಅವರ ಪುತ್ರಿ, ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಎಐಸಿಸಿ ವರಿಷ್ಠರ ಭೇಟಿ ಬಳಿಕ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಗಮನ ಸೆಳೆದಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಭೇಟಿ ಮಾಡಿದ್ದಾರೆ.