ಆರೋಗ್ಯಕ್ಕಾಗಿ ಸಮಯ ಮೀಸಲಿಡಲು ಸಿಇಒ ಪೂರ್ಣಿಮಾ
Jul 26 2025, 12:30 AM ISTಪ್ರತಿಯೊಬ್ಬರು ಆರೋಗ್ಯಕ್ಕಾಗಿ ಪ್ರತಿ ದಿನ ೪೫ ನಿಮಿಷ ನಡಿಗೆ, ೨೦ ನಿಮಿಷ ಯೋಗಾಭ್ಯಾಸ ಅಥವಾ ವ್ಯಾಯಾಮ ಮಾಡಬೇಕು ಜನರು ಜೀವನ ಶೈಲಿ ಹಾಗೂ ಆಹಾರ ಸೇವನೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ ತಿಳಿಸಿದ್ದಾರೆ. ಆಧುನಿಕ ಜೀವನ ಶೈಲಿಯಿಂದ ಹೃದಯ ಆರೋಗ್ಯದ ಕಡೆ ಗಮನಹರಿಸಬೇಕಿದೆ, ರಾಜ್ಯ ಸರ್ಕಾರ ಗೃಹ ಆರೋಗ್ಯ ಕಾರ್ಯಕ್ರಮದಡಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದ್ದು, ಅವಶ್ಯಕವಿರುವ ಚಿಕಿತ್ಸೆಯನ್ನು, ಮಾತ್ರೆಗಳನ್ನು ನೀಡಲಾಗುವುದು ಎಂದು ತಿಳಿಸಿದರು.