ನುಡಿದಂತೆ ನಡೆದಿರುವ ಕಾಂಗ್ರೆಸ್ ಸರ್ಕಾರ: ಡಾ.ದೀಪಾ
Apr 21 2024, 02:27 AM ISTರಾಮನಗರ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನಾ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷೆ ಡಾ.ದೀಪಾ ಮುನಿರಾಜು ತಿಳಿಸಿದರು.