ಸರ್ಕಾರ- ಪಕ್ಷದಲ್ಲಿ ಸಮನ್ವಯತೆ ಇಲ್ಲ: ಮಿಸ್ತ್ರಿಗೆ ನಾಯಕರಿಂದ ದೂರು
Jul 13 2024, 01:31 AM ISTಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ನಡುವೆ ತೀವ್ರ ಸಮನ್ವಯ ಕೊರತೆಯಿದೆ. ಇದರಿಂದ ಪಕ್ಷ ಹಾಗೂ ಸರ್ಕಾರ ಎರಡಕ್ಕೂ ನಷ್ಟ ಉಂಟಾಗುತ್ತಿದ್ದು, ಎರಡರ ನಡುವೆ ಸಮನ್ವಯ ಸಾಧಿಸಲು ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಎಐಸಿಸಿ ಸತ್ಯಶೋಧನಾ ಸಮಿತಿ ಎದುರು ರಾಜ್ಯ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ.