‘ತಮ್ಮ ವಿರುದ್ಧ ಹನಿಟ್ರ್ಯಾಪ್ ನಡೆದಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸದನದಲ್ಲಿಯೇ ಹೇಳಿದ್ದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. ಯಾವ ಪಕ್ಷದವರೇ ಆದರೂ ಅವರನ್ನು ಸುಮ್ಮನೇ ಬಿಡಲ್ಲ’ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಗೋವು ಸಂರಕ್ಷಣೆಗೆ ರಾಜ್ಯ ಸರ್ಕಾರ ಒತ್ತು ನೀಡದೆ, ನಿರ್ಲಕ್ಷವಹಿಸಿದೆ ಎಂದು ಬಿಜೆಪಿ ಶಾಸಕ ಶರಣು ಸಲಗರ ಮಾತಿಗೆ, ಕಾಂಗ್ರೆಸ್ ಸಚಿವರು ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಸದನದಲ್ಲಿ ಗದ್ದಲ ಏರ್ಪಟ್ಟಿತು.
ಸಂಧ್ಯಾಕಾಲದಲ್ಲಿ ಹೆತ್ತ ತಂದೆ-ತಾಯಿಯನ್ನು ಸಾಕಿ ಸಲಹದೆ ಈ ರೀತಿ ಅಮಾನವೀಯ ನಡೆ ಅನುಸರಿಸುತ್ತಿರುವವರಿಗೆ ಅವರ ಪೋಷಕರಿಂದ ವರ್ಗಾವಣೆ ಆಗಿರುವ ಆಸ್ತಿ, ಬರೆಸಿಕೊಂಡಿರುವ ವಿಲ್ ಅನ್ನು ರದ್ದುಪಡಿಸಲು ಕ್ರಮ ವಹಿಸುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ.