ಶರಾವತಿ ಸಂತ್ರಸ್ತರ ಸಮಸ್ಯೆ ಮರೆತ ಸರ್ಕಾರ
Feb 24 2024, 02:31 AM ISTನಾವು ಅಧಿಕಾರಕ್ಕೆ ಬಂದರೆ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಮಾತು ಕೊಟ್ಟಿದ್ದ ಕಾಂಗ್ರೆಸ್ ಸರ್ಕಾರ ಈಗ ಮಾತು ತಪ್ಪಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ನಾವು ಅಧಿಕಾರಕ್ಕೆ ಬಂದರೆ ಸಂತ್ರಸ್ತರ ಸಮಸ್ಯೆ ಬಗೆಹರಿಸುತ್ತೇವೆ ಎಂದಿದ್ದರು. ಆದರೆ, ಈಗ ಅಧಿಕಾರಕ್ಕೆ ಬಂದು 9 ತಿಂಗಳಾದರೂ ಈ ಬಗ್ಗೆ ಸರ್ಕಾರ ಚಕಾರವೇ ಎತ್ತುತ್ತಿಲ್ಲ ಎಂದು ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಶಿವಮೊಗ್ಗದಲ್ಲಿ ಆರೋಪಿಸಿದ್ದಾರೆ.