ಸರ್ಕಾರ ಖಜಾನೆಯಿಂದ ಒಂದು ಪೈಸೆ ಕೊಡಬೇಕಿಲ್ಲ, ಸರ್ಟಿಫಿಕೇಟ್ ಕೊಟ್ಟರೆ ಸಾಕು: ಯದುವೀರ್
Mar 01 2025, 01:03 AM ISTರಾಜ್ಯ ಸರ್ಕಾರ ಖಜಾನೆಯಿಂದ ಒಂದು ಪೈಸೆ ಕೊಡುವ ಅವಶ್ಯಕತೆ ಇಲ್ಲ, ಕೇವಲ ಒಂದು ಸರ್ಟಿಫಿಕೇಟ್ ಕೊಡಬೇಕಾಗಿದೆ. ಇಷ್ಟು ಟಿಡಿಆರ್ನ ಮಾಲೀಕರು ನಾವು ಅಂತ ಅಷ್ಟೇ. ಅದರ ಮೂಲಕ ರಸ್ತೆ ಅಭಿವೃದ್ಧಿ, ಅಗಲಿಕರಣ ಮಾಡಬಹುದು. 2009ರಲ್ಲಿ ಟಿಡಿಆರ್ ಕೊಡುತ್ತೇವೆ ಎಂದು ಸರ್ಕಾರ ನಿರ್ಣಯ ಕೈಗೊಂಡಿತ್ತು. ಅವತ್ತಿನಿಂದ ಇವತ್ತಿನ ವರೆಗೆ 15 ವರ್ಷ ಸುಪ್ರೀಂಕೋರ್ಟ್ನಲ್ಲಿ ವಾದ ಮಾಡಿಕೊಂಡು ಬಂದಿದ್ದೇವೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.