ಇಂದು ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ
Nov 24 2023, 01:30 AM ISTಜಿಲ್ಲಾ ಉಪಾಧ್ಯಕ್ಷ ಪುಟ್ಟನಗೌಡ ಮಾತನಾಡಿ, ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಕಳೆದ ಬಾರಿ ಹಾಗೂ ಈ ಬಾರಿ ಬರಗಾಲ ಉಂಟಾಗಿದೆ. ರಾಜ್ಯದ ಹಲವಾರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದರೂ, ಯಾವುದೇ ಪರಿಹಾರ ಕ್ರಮ ಕೈಗೊಳ್ಳುತ್ತಿಲ್ಲ. ಮಳೆ ಕೊರತೆ ನಡೆವೆಯೂ ಮೆಕ್ಕೆಜೋಳ ಎಕರೆಗೆ 3ರಿಂದ 4 ಕ್ವಿಂಟಲ್ ಬೆಳೆ ಬಂದಿದೆ. ರೈತರು ಸಂಕಷ್ಟದಲ್ಲಿ ಇದ್ದರೂ ಮಾರುಕಟ್ಟೆ ಇಲ್ಲ. ಮೆಕ್ಕೆಜೋಳಕ್ಕೆ ವಿಮೆ ಕಟ್ಟಿದರೂ ಪರಿಹಾರ ನೀಡದೇ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ತಕ್ಷಣ ರಾಜ್ಯ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.