ಅಧಿವೇಶನ: ವಿರೋಧ ಪಕ್ಷದ ಪ್ರಶ್ನೆಗೆ ಉತ್ತರಿಸಲು ಸರ್ಕಾರ ಸಿದ್ಧ

Nov 30 2023, 01:15 AM IST
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಅಧ್ಯಕ್ಷರ ನೇಮಕಾತಿಗೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದರು.

ಶೈಕ್ಷಣಿಕ ಕ್ರಾಂತಿಗೆ ಸರ್ಕಾರ ಸಿದ್ಧ

Nov 30 2023, 01:15 AM IST
ಪ್ರಾಥಮಿಕ ಶಾಲೆಯ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪಪ್ರತಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 5 ಕೆಪಿಎಸ್ ಶಾಲೆಯನ್ನು ಆರಂಭಿಸಲು ನಿರ್ಧರಿಸಲಾಗಿದ್ದು, ಅಗತ್ಯಕ್ಕೆ ತಕ್ಕಂತೆ ಶಿಕ್ಷಕರ ನೇಮಕ ಮಾಡುವ ಮೂಲಕ ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿಗೆ ಸರ್ಕಾರ ಸಿದ್ಧವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.ಬುಧವಾರ ಕರ್ನಾಟಕದ ತಿರುಪತಿ ಎಂದೇ ಖ್ಯಾತಿ ಪಡೆದಿರುವ ಕದರಮಂಡಲಗಿ ಗ್ರಾಮದಲ್ಲಿ ಹಳೇ ವಿದ್ಯಾರ್ಥಿಗಳು ₹1.16 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಪ್ರಾಥಮಿಕ ಶಾಲೆಯ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ಓದಿ ಸಾಧನೆ ಮಾಡಿದವರಿದ್ದಾರೆ. ಅವರೆಲ್ಲರೂ ತಾವು ಕಲಿತ ಶಾಲೆಗೆ ಸಾಧ್ಯವಾದಷ್ಟು ಧನಸಹಾಯ ಮಾಡಿದ್ದೇ ಆದಲ್ಲಿ ಸರ್ಕಾರದ ಹೊರೆ ಇಳಿಸುವುದರ ಜೊತೆಗೆ ದೇಶದಲ್ಲಿಯೇ ರಾಜ್ಯದ ಶಿಕ್ಷಣ ಇಲಾಖೆ ಮಾದರಿಯಾಗಲಿದೆ ಎಂದರು.