ಮತದಾನ ದಿನ ಮತ ಚಲಾಯಿಸಿ ಸುಭದ್ರ ಸರ್ಕಾರ ರಚಿಸಿ
Dec 16 2023, 02:00 AM ISTಗದಗ ಜಿಲ್ಲಾಡಳಿತ, ಜಿಪಂ ಹಾಗೂ ಸ್ವೀಪ್ ಸಮಿತಿಯಿಂದ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಾದ್ಯಂತ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಚುನಾವಣಾಧಿಕಾರಿ ವೈಶಾಲಿ ಎಂ.ಎಲ್. ಚಾಲನೆ ನೀಡಿದರು. ವಿದ್ಯುನ್ಮಾನ ಮತಯಂತ್ರದ ಬಳಕೆಯ ಪ್ರತಿ ಹಂತ ವಿವರಿಸಿ ಪ್ರಾತ್ಯಕ್ಷಿಕೆ ಸಾದರಪಡಿಸಿದರು. ಮತಯಂತ್ರ, ಕಂಟ್ರೋಲಿಂಗ್ ಯುನಿಟ್ ಹಾಗೂ ವಿವಿ ಪ್ಯಾಟ್ ಕಾರ್ಯ ಹಾಗೂ ಮತ ಚಲಾಯಿಸುವ ಪ್ರಕ್ರಿಯೆಯ ನ್ನು ಸಾರ್ವಜನಿಕರು ವೀಕ್ಷಿಸಿದರು.