ಸರ್ಕಾರ ಕಾಂತರಾಜ್ ವರದಿಯ ಅಂಗೀಕಾರಕ್ಕೆ ಮುಂದಾಗಲಿ
Dec 14 2024, 12:45 AM ISTಚಿತ್ರದುರ್ಗ: ಚಿತ್ರದುರ್ಗದಲ್ಲಿ ನಡೆದ ಶೋಷಿತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇನ್ನು ಆರು ತಿಂಗಳಲ್ಲಿ ಕಾಂತರಾಜ್ ವರದಿಯ ಅಂಗೀಕಾರ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಇಲ್ಲಿವರೆಗೂ ಯಾವುದೇ ಅಂಗೀಕಾರ ಆಗಿಲ್ಲ. ಕೆಲವರು ಈ ವರದಿಯನ್ನು ಅವೈಜ್ಞಾನಿಕ ಎಂದು ಗುರುತರವಾದ ಆಪಾದನೆ ಮಾಡುತ್ತಿದ್ದಾರೆ. ಈ ವರದಿಯನ್ನು ಸಂಪುಟದಲ್ಲಿ ಮಂಡಿಸಿ ಚರ್ಚಿಸಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಜಾರಿಗೆ ತರಬೇಕು ಎಂದು ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಬಿ.ಟಿ.ಜಗದೀಶ್ ಸರ್ಕಾರವನ್ನು ಒತಾಯಿಸಿದ್ದಾರೆ.