ಸರ್ಕಾರ ಅಲ್ಲಾಡಿಸುವುದು ತಿರುಕನ ಕನಸು: ಡಿ.ಕೆ.ಶಿವಕುಮಾರ್
Aug 04 2024, 01:18 AM ISTನಮ್ಮ ಪಕ್ಷದ ಒಬ್ಬ ಶಾಸಕನನ್ನು ಅಲ್ಲಾಡಿಸಲು ನಿಮ್ಮಿಂದ ಸಾಧ್ಯವಿಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವನ್ನು ನಿಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ. ಇದು ನಿಮ್ಮ ಭ್ರಮೆ, ತಿರುಕನ ಕನಸು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುಡುಗಿದರು. ರಾಮನಗರದಲ್ಲಿ ಆಯೋಜಿಸಿದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು.