ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಮನಸ್ಸು ಮಾಡಿ
Jul 03 2025, 11:49 PM ISTಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣ ನೀಡುತ್ತಿರುವುದ ಜೊತೆಗೆ ಸರ್ಕಾರದಿಂದ ಮಧ್ಯಾಹ್ನದ ಬಿಸಿ ಊಟ, ಉಚಿತ ಸಮವಸ್ತ್ರ, ಉಚಿತ ಪುಸ್ತಕ ಸೇರಿದಂತೆ ಹಲವಾರು ಸವಲತ್ತುಗಳನ್ನು ನೀಡುತ್ತಿದ್ದರು ಸಹ, ಪೋಷಕರು ತಮ್ಮ ಮಕ್ಕಳನ್ನು ಸಾವಿರಾರು ರುಪಾಯಿ ಡೊನೇಷನ್ ನೀಡಿ ಪಟ್ಟಣಗಳಲ್ಲಿರುವ ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವುದು ದುರದೃಷ್ಟಕರ. ಆದ್ದರಿಂದ ಸರ್ಕಾರದವರು ಖಾಸಗಿ ಶಾಲೆಗಳ ಹಾವಳಿಗೆ ಕಡಿವಾಣ ಹಾಕಬೇಕು. ಪೋಷಕರು ಸಹ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಮನಸ್ಸು ಮಾಡಬೇಕು ಎಂದರು.