ದಾಖಲಾತಿ ಹೆಚ್ಚಿಸದಿದ್ದರೆ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ
Aug 03 2024, 12:38 AM IST ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಗಳನ್ನು ಹೆಚ್ಚಿಸದೇ ಹೋದಲ್ಲಿ, ಮುಂದಿನ ದಿನಗಳಲ್ಲಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿ ಶಿಕ್ಷಕರ ನೇಮಕಾತಿ ನಿಲ್ಲಿಸುವ ಸಾಧ್ಯತೆಯೂ ಹೆಚ್ಚಿದೆ ಎಂದು ಶಿಕ್ಷಣ ಇಲಾಖೆ ಜಿಲ್ಲಾ ನಿರ್ದೇಶಕ ಎಚ್.ಕೆ. ಪಾಂಡು ಸಲಹೆ ನೀಡಿದರು. ಹೊಳೆನರಸೀಪುರ ಪಟ್ಟಣದ ಶಿಕ್ಷಕರ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾ. ಘಟಕ ಆಯೋಜನೆ ಮಾಡಿದ್ದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.