ಕೆರೆ ಒತ್ತುವರಿ, ಸರ್ಕಾರಿ ಜಾಗ ಅತಿಕ್ರಮಣ ತೆರವುಗೊಳಿಸಿ: ಸಚಿವ ಆರ್.ಬಿ.ತಿಮ್ಮಾಪುರ

Jan 18 2024, 02:00 AM IST
ಮುಧೋಳ: ನಗರದ ತಾಪಂ ಸಭಾಭವನದಲ್ಲಿ ಬುಧವಾರ ತಾಲೂಕು ಮಟ್ಟದ ದ್ವಿತೀಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಸಚಿವ ಆರ್‌.ಬಿ. ತಿಮಮಾಪುರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರ ಮತ್ತು ತಾಲೂಕಿನಲ್ಲಿ ಕೆರೆ ಒತ್ತುವರಿ, ಸರ್ಕಾರಿ ಜಾಗ ಅತಿಕ್ರಮಣ ತೆರವುಗೊಳಿಸಬೇಕು. ಸಮುದಾಯ ಭವನಗಳನ್ನು ತಮ್ಮ ಸ್ವಾಧೀನದಲ್ಲಿ ಪಡೆದುಕೊಳ್ಳಬೇಕು,ಮಾರ್ಚ್‌ ತಿಂಗಳೊಳಗೆ ಸರ್ಕಾರದ ಅನುದಾನ ಬಳಕೆ ಮಾಡಿಕೊಳ್ಳಬೇಕು, ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಲೋಕಸಭೆ ಚುನಾವಣೆ ನೀತಿಸಂಹಿತೆ ಘೋಷಣೆ ಆಗುವ ಮುನ್ನವೇ ಎಲ್ಲ ಕೆಲಸಗಳನ್ನು ಪೂರ್ಣ ಮಾಡಬೇಕೆಂದು ಸಚಿವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.