ಸರ್ಕಾರಿ ಯೋಜನೆ ಸಾಲ ಮಂಜೂರಾತಿಗೆ ಸಿಬಿಲ್ ಪರಿಗಣನೆ ಬೇಡ
Oct 17 2023, 12:30 AM ISTಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಮಂಜೂರಾತಿಗೆ ಬ್ಯಾಂಕುಗಳು ಸಿಬಿಲ್ ಸ್ಕೋರ್ ಪರಿಗಣಿಸಬಾರದು ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಾಕೀತು ಮಾಡಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಸಫಾಯಿ ಕರ್ಮಚಾರಿ ಹಾಗೂ ದಿವ್ಯಾಂಗರ ರಾಷ್ಟ್ರೀಯ ಹಣಕಾಸು ಹಾಗೂ ಅಭಿವೃದ್ಧಿ ನಿಗಮಗಳ ಅನುದಾನದಡಿ ನೀಡುವ ಸಾಲ ಸೌಲಭ್ಯ ಯೋಜನೆಗಳ ಅನುಷ್ಠಾನದ ಕುರಿತು ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಹಾಲು ಉತ್ಪಾದಕ ಸಂಘಗಳ ಸಹಯೋಗದಲ್ಲಿ ಹಸು ಸಾಕಾಣಿಕೆಗೆ, ಸಣ್ಣ ಘಟಕಗಳ ಆಧಾರದಲ್ಲಿ ಪಾರಂಪರಿಕವಾಗಿ ಕುರಿ ಸಾಕಾಣಿಕೆ ಮಾಡಿಕೊಂಡು ಬಂದ ಸಮುದಾಯಗಳಿಗೆ ರಿಯಾಯಿತಿ ಬಡ್ಡಿದರದಲ್ಲಿ ಸಾಲ ಒದಗಿಸುವಂತೆ ಸೂಚಿಸಿದರು.