ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ: ಅಶೋಕ ಹೆಗಡೆ
Jan 15 2024, 01:48 AM ISTಗುಳೇದಗುಡ್ಡ: ನಾನು ಬಡವ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿದ್ದೇತ್ತೇನೆ ಎಂಬ ಕೀಳರಿಮೆ ಮಕ್ಕಳಲ್ಲಿ ಇರಬಾರದು. ಸರ್ಕಾರಿ ಶಾಲೆಯಲ್ಲಿಯೂ ಉತ್ತಮ ಕಲಿಕೆಗೆ ಪೂರಕವಾದ ವಾತಾವರಣ ಇದೆ. ಮಕ್ಕಳಲ್ಲಿ ನಿರಂತರ ಕಲಿಕೆ, ಪರಿಶ್ರಮ ಇದ್ದರೆ ಸರ್ಕಾರಿ ಶಾಲೆಯಲ್ಲಿಯೇ ಉನ್ನತ ಸಾಧನೆ ಮಾಡಬಹುದು ಎಂದು ಸಾಮಾಜಿಕ ಹೋರಾಟಗಾರ ಅಶೋಕ ಹೆಗಡೆ ಹೇಳಿದರು. ಪಟ್ಟಣದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.1ರಲ್ಲಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಮಕ್ಕಳಿಗೆ ನೋಟ್ ಬುಕ್, ಪೆನ್, ಬಟಿಂಗ್ಸ್, ಕಂಪಾಸ್ ಹಾಗೂ ಸಿಹಿ ವಿತರಿಸಿ ಮಾತನಾಡಿದರು.