18ರಿಂದ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ
May 06 2025, 12:18 AM ISTಶಿವಮೊಗ್ಗ: ಜಿಲ್ಲಾಡಳಿತವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಮೇ 18ರಿಂದ 21ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗದಲ್ಲಿ ಏರ್ಪಡಿಸಲು ಉದ್ದೇಶಿಸಲಾಗಿದ್ದು, ಕ್ರೀಡಾಕೂಟವು ಯಶಸ್ವಿಯಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.