ಸರ್ಕಾರಿ ಶಾಲೆಗಳು ಮುಚ್ಚುತ್ತಿರುವುದಕ್ಕೆ ಕಳವಳ
Dec 14 2024, 12:48 AM ISTಕನ್ನಡ ಭಾಷೆಯ ಬೆಳವಣಿಗೆಗೆ ಸಂವಿಧಾನದ ಸಹಾಯಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು. ಶುಕ್ರವಾರ ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ನಾಲ್ಕನೇ ತಾಲೂಕು ಕನ್ನಡ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಹಿಂದಿ ಭಾಷೆಗೆ ಸಂವಿಧಾನದ ಬಲ ಇರುವ ಕಾರಣ ವೇಗವಾಗಿ ಬೆಳಯುತ್ತಿದೆ. ಇದೇ ರೀತಿ ರಾಜ್ಯ ಸರ್ಕಾರ ಸಹ ಕನ್ನಡ ಬೆಳವಣಿಗೆಗೆ ಸಂವಿಧಾನ ಬಲ ನೀಡಬೇಕಿದೆ ಎಂದರು.