ಅರ್ಹರಿಗೆ ಸರ್ಕಾರಿ ಸೌಲಭ್ಯ ಒದಗಿಸಿಸಲು ಡೀಸಿ ಸಲಹೆ
Jul 20 2025, 01:20 AM ISTಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಮಾತನಾಡಿದ ಅವರು, ಕೆರೆ, ಗೋಮಾಳ ಮತ್ತು ಸ್ಮಶಾನ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು ಕ್ರಮವಹಿಸುವಂತೆ ಉಪ ವಿಭಾಗಾಧಿಕಾರಿಗೆ ಸೂಚಿಸಿದರು. ದುರಸ್ತಿಗಾಗಿ ಸ್ವೀಕೃತವಾದ ಅರ್ಜಿಗಳಲ್ಲಿ ಅಗತ್ಯ ದಾಖಲೆಗಳು ಇಲ್ಲದಿದ್ದಲ್ಲಿ ಅಂತಹವುಗಳನ್ನು ಮಿಸ್ಸಿಂಗ್ ಕಮಿಟಿಯಲ್ಲಿಡಲು ತಿಳಿಸಿದರಲ್ಲದೆ, ಆಲೂರು ತಾಲೂಕಿನ ಬಂಡಿ ತಿಮ್ಮನಹಳ್ಳಿಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೊಳವೆ ಬಾವಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಿದಾಗ ಅರ್ಜಿ ಸಲ್ಲಿಸಲು ತಿಳಿಸಿದರು.