ಸರ್ಕಾರಿ ಶಾಲೆಗಳನ್ನು ಉಳಿಸಲು ಎಲ್ಲರೂ ಪ್ರಯತ್ನಿಸಿ
Feb 02 2025, 11:46 PM ISTಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳನ್ನು ಉಳಿಸಲು ಎಲ್ಲರೂ ಗಮನಹರಿಸಬೇಕು ಎಂದು ತಾಲೂಕು ಸರ್ಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷ ಹನ್ಯಾಳು ಕುಮಾರ್ ಮನವಿ ಮಾಡಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಇಂದ್ರೇಗೌಡ ಮಾತನಾಡಿ, ಮಕ್ಕಳು ಮತ್ತು ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬದಿಗಿರಿಸಿ ಸರ್ಕಾರಿ ಶಾಲೆಗಳ ಕಡೆಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.