ಸರ್ಕಾರಿ ಕಾಲೇಜುಗಳಿಗೆ ಶೀಘ್ರವೇ ಅತಿಥಿ ಉಪನ್ಯಾಸಕರ ನೇಮಿಸಿ
Sep 27 2025, 12:00 AM ISTರಾಜ್ಯ ಸರ್ಕಾರಿ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ತಕ್ಷಣವೇ ನೇಮಕಾತಿಗೆ ಒತ್ತಾಯಿಸಿ ಎಬಿವಿಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ, ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಅಹೋರಾತ್ರಿ ಧರಣಿ ನಡೆಸುವುದಾಗಿ ಮುಖಂಡರು ಘೋಷಿಸಿದ್ದಾರೆ.