ಸರ್ಕಾರಿ ಶಾಲೆಗಳಲ್ಲಿ ಸಕಲ ಸೌಲಭ್ಯಗಳಿವೆ ವಿದ್ಯಾರ್ಥಿಗಳು ಬಳಸಿಕೊಳ್ಳಿ
Mar 29 2025, 12:35 AM ISTಬೇಲೂರು ಪಟ್ಟಣದ ವೈಡಿಡಿ ಕಾಲೇಜಿನಲ್ಲಿ ಹೊಸದಾಗಿ ಬಿಸಿಎ ಕೋರ್ಸ್ ಪ್ರಾರಂಭಿಸಲಾಗಿದ್ದು ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಶಾಸಕ ಎಚ್.ಕೆ ಸುರೇಶ್ ಹೇಳಿದರು. ಸರ್ಕಾರ ಕೂಡ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಮಕ್ಕಳ ಸಂಖ್ಯೆ ಹೆಚ್ಚಳಕ್ಕೆ ಆಂದೋಲನ, ಹಳ್ಳಿ ಹಳ್ಳಿಗಳಲ್ಲಿ ಶಿಬಿರಗಳನ್ನು ನಡೆಸುತ್ತಿದ್ದರೂ ಪೋಷಕರ ಮನಸ್ಸು ಖಾಸಗಿ ಶಾಲೆಗಳ ಕಡೆ ಇದೆ. ಉತ್ತಮ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಕಾಲೇಜುಗಳು ಖಾಸಗಿ ಕಾಲೇಜುಗಳ ಜೊತೆ ಪೈಪೋಟಿ ನಡೆಸುತ್ತಿವೆ, ಸರ್ಕಾರಿ ಶಾಲೆ ಕಾಲೇಜುಗಳನ್ನು ಉಳಿಸಿ ಬೆಳೆಸುವ ಕೆಲಸವನ್ನು ಪೋಷಕರು ಮಾಡಬೇಕೆಂದರು.