ಸರ್ಕಾರಿ ಶಾಲೆಯಲ್ಲಿ ಸಿಗುವ ಗುಣಮಟ್ಟದ ಶಿಕ್ಷಣ ಕುರಿತು ಜನಜಾಗೃತಿ ಅಗತ್ಯ
Mar 24 2025, 12:31 AM ISTಸರ್ಕಾರಿ ಶಾಲೆಗಳಲ್ಲಿ ಸಿಗುವ ಸವಲತ್ತುಗಳು ಹಾಗೂ ಗುಣಮಟ್ಟದ ಶಿಕ್ಷಣ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಬೇಕಾಗಿದೆ ಎಂದು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗೂ ಚನ್ನರಾಯಪಟ್ಟಣ ಲಯನ್ಸ್ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಡಾ.ವಿ. ಮಹೇಶ್ ಅಭಿಪ್ರಾಯಪಟ್ಟರು. ತಿಯೊಂದು ಮಗುವಿನಲ್ಲೂ ವಿಭಿನ್ನ ಆಲೋಚನೆ ಹಾಗೂ ಆವಿಷ್ಕಾರ ಕಟ್ಟಿಕೊಳ್ಳುವ ಹುರುಪು ಇರುತ್ತದೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನೀಡುವ ಗುಣಮಟ್ಟದ ಶಿಕ್ಷಣ, ಸರ್ಕಾರಿ ಶಾಲೆಯಲ್ಲೇ ಸಿಗುತ್ತದೆ ಎಂದರು.