ಸಾಮಾಜಿಕ ಜಾಲತಾಣಗಳ ಮಿತವಾಗಿ ಬಳಸಿ: ಎಸ್‌ಪಿ ಉಮಾ ಪ್ರಶಾಂತ್
Jan 20 2024, 02:04 AM ISTಜ್ಞಾನ ಪಡೆಯಲು ಮಾತ್ರ ಸಾಮಾಜಿಕ ಜಾಲತಾಣ ಮಿತವಾಗಿ ಬಳಸಿ, ವಿಶೇಷವಾಗಿ ಪ್ರತಿಯೊಬ್ಬರೂ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಅನಕ್ಷರಸ್ಥರಷ್ಟೇ ಅಲ್ಲ, ವಿದ್ಯಾವಂತರು ಕೂಡ ಸೈಬರ್ ಕಳ್ಳರ ಜಾಲದಲ್ಲಿ ಸಿಲುಕಿ, ಲಕ್ಷಾಂತರ ರುಪಾಯಿ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕಿದೆ.