ವಿದ್ಯೆ ಜತೆಗೆ ಸಾಮಾಜಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಿ
Dec 16 2024, 12:47 AM ISTಮಕ್ಕಳಿಗೆ ವಿದ್ಯೆಯೊಂದಿಗೆ ನಮ್ಮ ಸಂಸ್ಕೃತಿ, ಸಂಸ್ಕಾರ ಹಾಗೂ ಸಾಮಾಜಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳುವಲ್ಲಿ ಶಿಕ್ಷಕರ ಹಾಗೂ ಪೋಷಕರ ಪಾತ್ರ ಮಹತ್ತರದ್ದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಹೇಳಿದರು. ಇತ್ತೀಚಿನ ದಿನಗಳಲ್ಲಿನ ಜಂಜಾಟದ ಒತ್ತಡದ ಬದುಕಿನಲ್ಲಿ ಪೋಷಕರು ಮಕ್ಕಳನ್ನು ಶಾಲೆಗೆ ಹಳುಹಿಸಿದರೆ ಸಾಕು ಎನ್ನುತ್ತಾರೆ. ನಾವು ಮಕ್ಕಳಿಗೆ ಏನು ಕೊಡಬೇಕೆಂಬುದನ್ನು ಬಿಟ್ಟು ದುಡಿಮೆಯಲ್ಲೆ ತೊಡಗುತ್ತೇವೆ. ಮನೆಯೇ ಮೊದಲ ಪಾಠಶಾಲೆ, ತಾಯಿ ಮೊದಲ ಗುರುವಾದರೆ ಶಾಲೆಯಲ್ಲಿ ಶಿಕ್ಷಕರು ಎರಡನೇ ತಾಯಿಯಾಗಿರುತ್ತಾರೆ ಎಂಬುದನ್ನು ಪ್ರತಿಯೊಬರೂ ಅರ್ಥ ಮಾಡಿಕೊಳ್ಳಬೇಕು ಎಂದರು.