ಶಿಕ್ಷಣದಿಂದ ಮಾತ್ರ ಸಾಮಾಜಿಕ ಸ್ಥಿತಿಗತಿ ಬದಲಾವಣೆ
Nov 04 2023, 12:30 AM ISTಶಿಕ್ಷಣದಿಂದ ಮಾತ್ರ ಸಾಮಾಜಿಕ ಸ್ಥಿತಿಗತಿ ಬದಲಾವಣೆ ಸಾಧ್ಯ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದು ಸರಸ್ವತಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್. ಸುಧಾದೇವಿ ಹೇಳಿದರು.ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ ದಾವಣಗೆರೆ ವಿಶ್ವವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಐಕ್ಯೂಎಸಿ ಸಹಯೋಗದಲ್ಲಿ 2023-24ನೇ ಸಾಲಿನ ಪಠ್ಯೇತರ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಕರು ಉಪನ್ಯಾಸ ನೀಡುವುದರ ಜೊತೆಗೆ ಹೆಣ್ಣು ಮಕ್ಕಳು ಯಾವ ರೀತಿಯಾಗಿ ಸಮಾಜದಲ್ಲಿ ಬದುಕಬೇಕು ಎಂಬ ನೀತಿ ಪಾಠ ಹೇಳಬೇಕು ಎಂದರು.