ಫೆಬ್ರವರಿಯಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನ
Jan 19 2025, 02:19 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳಈಗಾಗಲೇ ಸಾಹಿತ್ಯಾಸಕ್ತರು ಗಣ್ಯರು ತೀರ್ಮಾನ ಮಾಡಿದಂತೆ ಮುಂದಿನ ತಿಂಗಳಲ್ಲಿ ಮುದ್ದೇಬಿಹಾಳ ಪಟ್ಟಣದಲ್ಲಿ 5ನೇ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು, ಸಾಹಿತಿಗಳು ಕನ್ನಡಪರ ಸಂಘಟನೆಯ ಪದಾಧಿಕಾರಿಗಳು ಎಲ್ಲರೂ ಸಮ್ಮೇಳನದ ಯಶಸ್ವಿಗೆ ಸಹಕಾರವನ್ನು ನೀಡುವ ಮೂಲಕ ಅಕ್ಷರ ಜಾತ್ರೆಗೆ ಮೆರುಗು ನೀಡಬೇಕೆಂದು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಾಮರಾಜ ಬಿರಾದಾರ ಮನವಿ ಮಾಡಿದರು.