ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ದುಡಿಯೋಣ
Oct 07 2024, 01:32 AM ISTಕನ್ನಡಪ್ರಭ ವಾರ್ತೆ ತೇರದಾಳ(ರ-ಬ) ಎಲ್ಲಾದರೂ ಇರು. ಎಂಥಾದರೂ ಇರು. ಎಂದೆಂದಿಗೂ ನೀ ಕನ್ನಡವಾಗಿರು ಎನ್ನುವ ಮಾತನ್ನು ಮರೆಯದೆ ನಾವೆಲ್ಲರೂ ನಮ್ಮ ನಾಡು-ನುಡಿ ಕುರಿತಾಗಿ ಇನ್ನಷ್ಟು ಅಭಿಮಾನ ತಳೆಯಬೇಕಿದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬೆಳಗಾವಿ ಜಿಲ್ಲೆಯಿಂದ ಬಾಗಲಕೋಟೆ ಜಿಲ್ಲೆಗೆ ಪ್ರವೇಶಿಸಿದ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆಗೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ರಥಕ್ಕೆ ಪುಷ್ಪಾರ್ಚನೆ ಮಾಡಿ, ಸ್ವಾಗತ ಕೋರಿ, ಭುವನೇಶ್ವರಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.