ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ತಮಗಿಂತ ಹೆಚ್ಚು ಸಂತೋಷಪಡುವವರು ಬೇರೆ ಯಾರೂ ಇಲ್ಲ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿಯುತ್ತಿರುವವರಿಗೆ ರಾಜ್ಯದಲ್ಲಿ ಆರ್ಥಿಕ ಪ್ರಗತಿ ಪ್ರಗತಿ ಸಾಧಿಸಿ ತೋರಿಸುವ ಮೂಲಕ ನಾವು ಉತ್ತರ ನೀಡಲಿದ್ದೇವೆ.
ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಅಧಿವೇಶನದಲ್ಲಿ ಉತ್ತರ ನೀಡದೆ ಓಡಿ ಹೋದ ರಣಹೇಡಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಾಪ್ರಹಾರ ನಡೆಸಿದ್ದಾರೆ.