ಮುಖ್ಯಮಂತ್ರಿಗಳ ಧರ್ಮಪತ್ನಿ ಪಾರ್ವತಿ ಅವರು ಎಂದೂ ಅಧಿಕಾರ ದುರ್ಬಳಕೆ ಮಾಡಿಕೊಂಡವರಲ್ಲ. ಮುಖ್ಯಮಂತ್ರಿ ಪತ್ನಿಯಾಗಿದ್ದರೂ ದೇವಾಲಯಕ್ಕೆ ಹೋದರೆ ಸರದಿ ಸಾಲಿನಲ್ಲಿ ನಿಂತವರು ಎಂದು ಡಿ.ಕೆ. ಶಿವಕುಮಾರ್ ಹೇಳಿದರು..
ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎದುರಾಗಿರುವ ಸಂಕಷ್ಟ ಮತ್ತಷ್ಟು ಜಟಿಲವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಾಗಿದೆ.
ನೀವು ಭ್ರಷ್ಟಾಚಾರದ ಫಲಾನುಭವಿಯೂ ಹೌದು. ಪೋಷಕರು ಹೌದು. ರೀಡೂ ಪಿತಾಮಹ ಯಾರು?, ರೀಡೂ ಹೆಸರಿನಲ್ಲಿ 884 ಎಕರೆ ಡಿ-ನೋಟಿಫೈಕೇಷನ್ ಮಾಡಲಾಯಿತು. ಅದು ಅಕ್ರಮವಲ್ಲವೇ?, ಕೆಂಪಣ್ಣ ಆಯೋಗದ ವರದಿಯಲ್ಲಿ ಅರ್ಕಾವತಿ ಬಡಾವಣೆಯಲ್ಲಿ ಹಗರಣ ಆಗಿರುವುದು ತಪ್ಪು ಎಂಬುದು ಸಾಬೀತಾಗಿದೆ.
ಆಪರೇಷನ್ ಕಮಲದ ಮೂಲಕ ಸರ್ಕಾರ ಬೀಳಿಸಲು ವಿಫಲರಾದ ಹಿನ್ನೆಲೆಯಲ್ಲಿ ಇದೀಗ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಅದು ಯಾವತ್ತೂ ಯಶಸ್ವಿಯಾಗುವುದಿಲ್ಲ. ಇವರ ಸುಳ್ಳುಗಳಿಗೆ ನಾನು ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
‘ಮುಡಾ ನಿವೇಶನ ವಿಚಾರದಲ್ಲಿ ನಾನು ಲೋಪ ಎಸಗಿಲ್ಲ. ಹೀಗಾಗಿ ನನ್ನ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಸಲ್ಲಿಕೆಯಾಗಿರುವ ದುರುದ್ದೇಶದ ಅರ್ಜಿಯನ್ನು ತಿರಸ್ಕರಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ನೀಡಿರುವ ಉತ್ತರದಲ್ಲಿ ಆಗ್ರಹಿಸಿದ್ದಾರೆ ಎನ್ನಲಾಗಿದೆ.