‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಾವು ಸಿಎಂ ಆಗಬೇಕು ಎಂಬ ಆಸೆ ಇದೆ. ಅವರು ಕೂಡ ಮುಖ್ಯಮಂತ್ರಿ ಆಗಬೇಕು ಎಂದು ಬಯಸುವವನು ನಾನು. ಆದರೆ, ಈ ಐದು ವರ್ಷ ಮಾತ್ರ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ’ ಎಂದು ವಸತಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಆ ಕುರಿತು ಮಾತನಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸೂಚನೆ ನೀಡಲಾಗಿದೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ತಿಳಿಸಿದ್ದಾರೆ.
ಮುಂಬರುವ ನವೆಂಬರ್ ಇಲ್ಲವೇ ಡಿಸೆಂಬರ್ ಒಳಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವುದು ಖಚಿತ, ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಹುದ್ದೆಯಿಂದ ಇಳಿಯುತ್ತಾರೆ. ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಹೇಳಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ವಿಚಾರ ಚರ್ಚೆಯಲ್ಲಿಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಹೈಕಮಾಂಡ್ ಎಚ್ಚರಿಕೆ ನಂತರವೂ ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ ಶಾಸಕ ಡಾ.ರಂಗನಾಥ್ ಮತ್ತು ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಅವರಿಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಕಾರಣ ಕೇಳಿ ನೋಟಿಸ್ ನೀಡಿದೆ.