ಆ.29ಕ್ಕೆ ಸಿಎಂ ಪರ ರಾಜ್ಯಾದ್ಯಂತ ಡಿಎಸ್‌ಎಸ್ ಹೋರಾಟ
Aug 27 2024, 01:30 AM ISTಕನ್ನಡಪ್ರಭ ವಾರ್ತೆ ವಿಜಯಪುರ 40ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದವರು ಮುಖ್ಯಮಂತ್ರಿ ಸಿದ್ಧರಾಮಯ್ಯ. ಅವರ ವಿರುದ್ದ ಸುಳ್ಳು ಆರೋಪ ಹೊರೆಸಿರುವ ಬಿಜೆಪಿ-ಜೆಡಿಎಸ್ ನಾಯಕರ ಕುತಂತ್ರ ಹಾಗೂ ಕೇಂದ್ರದ ಕೈಗೊಂಬೆಯಾಗಿರುವ ರಾಜ್ಯಪಾಲರ ನಡೆ ಖಂಡಿಸಿ ಆ.29ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ ಹೇಳಿದರು.