ಮುಡಾ ಹಗರಣದಿಂದ ಪಾರಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಸಾಯಿ ಆಯೋಗ ರಚನೆ ಮಾಡಿದ್ದು, ಆಯೋಗದ ವರದಿ ತಗೊಂಡು ನೆಕ್ಕಲು ಆಗುತ್ತಾ ಎಂದು ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು
ರಾಜ್ಯದ ಬೇಡಿಕೆ, ವಿಚಾರಗಳನ್ನು ಮಂಡಿಸಲು ನೀತಿ ಆಯೋಗದ ಸಭೆಯು ಒಂದು ಉತ್ತಮವಾದ ವೇದಿಕೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆಗೆ ಗೈರುಹಾಜರಾಗಿರುವುದು ಕೆಟ್ಟ ಬೆಳವಣಿಗೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೇಸರ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೇ ಸ್ವತಃ ಮುಖ್ಯಮಂತ್ರಿ ಆಗಿದ್ದಾಗ ಬದಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಬರೋಬ್ಬರಿ 32,800 ಚದರಡಿ ನಿವೇಶನ ನೀಡಲು ಮುಡಾ ನಿರ್ಣಯ ತೆಗೆದುಕೊಂಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
‘ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಕರ್ನಾಟಕದ ಹೆಸರಿನ ಪ್ರಸ್ತಾಪವೇ ಇಲ್ಲ. ಹಲವು ವರ್ಷಗಳಿಂದ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ.