ಕಳೆದ10 ವರ್ಷಗಳಿಂದ ಕೇಂದ್ರಗಳಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಬರೀ ಸುಳ್ಳುಗಳನ್ನೇ ಹೇಳುತ್ತಾ ಜನರನ್ನು ವಂಚಿಸುತ್ತಾ ರಾಜ್ಯಕ್ಕೆ ಅನ್ಯಾಯ ಮಾಡಿದೆ, ಇದನ್ನು ಸರಿಪಡಿಸಬೇಕಾದರೆ ಈ ಬಾರಿ ಬಿಜೆಪಿಯನ್ನು ಸೋಲಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬರ ಪರಿಹಾರ ನೀಡುವ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಅಮಿತ್ ಶಾ ಅವರು ಬಿಜೆಪಿಯ ಚುನಾವಣಾ ಪ್ರಚಾರವನ್ನು ಉದ್ಘಾಟಿಸಿದ್ದಾರೆ. ಅವರ ಸುಳ್ಳಿನ ಪ್ರಚಾರಕ್ಕೆ ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ 60 ಸಾವಿರ ಲೀಡ್ ಬಂದರೆ ತಮ್ಮನ್ನು ಯಾರೂ ಮುಟ್ಟಲಿಕ್ಕಾಗಲ್ಲ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನಸ್ಸಿನ ಮಾತು. ಒಂದು ವೇಳೆ ಹಿನ್ನಡೆಯಾದರೆ ತಮ್ಮನ್ನು ಬದಲಾವಣೆ ಮಾಡುತ್ತಾರೆ ಎಂಬ ಸಂದೇಶವನ್ನು ನೀಡಿದ್ದಾರೆ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.