ಆಲಮಟ್ಟಿಗೆ ಇಂದು ಸಿಎಂ ಬಾಗಿನ ಅರ್ಪಣೆ
Aug 21 2024, 12:31 AM ISTಕನ್ನಡಪ್ರಭ ವಾರ್ತೆ ಆಲಮಟ್ಟಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆ.21ರಂದು ಆಲಮಟ್ಟಿಯ ಕೃಷ್ಣಾ ನದಿಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಿಸುತ್ತಿರುವ ಹಿನ್ನೆಲೆಯಲ್ಲಿ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನರಾಜ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಂಗಳವಾರ ಆಲಮಟ್ಟಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೇ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.