ಕೆಆರ್‌ಎಸ್ ಜಲಾಶಯಕ್ಕೆ ಸಿಎಂ, ಡಿಸಿಎಂ ಬಾಗಿನ
Jul 01 2025, 12:47 AM ISTಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿಯಾದ ಕೃಷ್ಣರಾಜಸಾಗರ ಜಲಾಶಯದಲ್ಲಿ ವಾಡಿಕೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಡಿಸಿಎಂ ಡಿ.ಕೆ.ಶಿವಕುಮಾರ್, ಹಲವು ಸಚಿವರು, ಸ್ಥಳೀಯ ಜಲಪ್ರತಿನಿಧಿಗಳ ಜೊತೆ ಜಲಾಶಯಕ್ಕೆ ಆಗಮಿಸಿ, ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದರು. ಇದರೊಂದಿಗೆ ಜೂನ್ ತಿಂಗಳಲ್ಲಿ ಬಾಗಿನ ಅರ್ಪಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರರಾದರು.