ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಅಧಿವೇಶನದಲ್ಲಿ ಉತ್ತರ ನೀಡದೆ ಓಡಿ ಹೋದ ರಣಹೇಡಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಾಪ್ರಹಾರ ನಡೆಸಿದ್ದಾರೆ.
ಮುಖ್ಯಮಂತ್ರಿಗಳ ಧರ್ಮಪತ್ನಿ ಪಾರ್ವತಿ ಅವರು ಎಂದೂ ಅಧಿಕಾರ ದುರ್ಬಳಕೆ ಮಾಡಿಕೊಂಡವರಲ್ಲ. ಮುಖ್ಯಮಂತ್ರಿ ಪತ್ನಿಯಾಗಿದ್ದರೂ ದೇವಾಲಯಕ್ಕೆ ಹೋದರೆ ಸರದಿ ಸಾಲಿನಲ್ಲಿ ನಿಂತವರು ಎಂದು ಡಿ.ಕೆ. ಶಿವಕುಮಾರ್ ಹೇಳಿದರು..
ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬಿ.ವೈ. ವಿಜಯೇಂದ್ರ ಕಡತಗಳಿಗೆ ನಕಲಿ ಸಹಿ ಮಾಡಿದ್ದಾರೆ. ಈ ಬಗ್ಗೆ ತನಿಖೆ ಮಾಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು.
ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎದುರಾಗಿರುವ ಸಂಕಷ್ಟ ಮತ್ತಷ್ಟು ಜಟಿಲವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಾಗಿದೆ.